ಅಡಿಗಾಸ್ ಯಾತ್ರಾ

Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದ್ದಕ್ಕೆ ಅಡಿಗಾಸ್‌ ಯಾತ್ರಾ ಸ್ವಾಗತ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಪ್ರವಾಸೋದ್ಯಮ ಸರ್ಕ್ಯೂಟ್‌ ಅಭಿವೃದ್ಧಿ, ರೋಪ್‌ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್‌ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್‌ ಯಾತ್ರಾದ ಸ್ಥಾಪಕ ಕೆ. ನಾಗರಾಜ್‌ ಅಡಿಗ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಮಾರಕಗಳನ್ನು ರಕ್ಷಿಸಲು 1000 ಕ್ಕೂ ಹೆಚ್ಚು ಸ್ಮಾರಕ ಮಿತ್ರರಿಗೆ ತರಬೇತಿ ನೀಡುವ ಯೋಜನೆ ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್‌ ಅನ್ನು ಅಭಿವೃದ್ಧಿಪಡಿಸುವುದು ಉತ್ತಮ ಆಯ್ಕೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್‌-ವೇ ನಿರ್ಮಿಸುವುದು ಕೂಡ ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 100 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾದ ಯೋಜನೆ, ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್‌ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ ಎಂದು ನಾಗರಾಜ್‌ ಅಡಿಗರು ವಿವರಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼಯನ್ನು ರೂಪಿಸಿರುವುದು, ಈ ತಾಣಗಳಲ್ಲಿ ವಾಯುಯಾನ ಹಾಗೂ ಜಲಸಾಹಸ ಪ್ರವಾಸೋದ್ಯಮ ಭಾಗೀದಾರರ ಸಹಯೋಗದೊಂದಿಗೆ ಸೀ ಪ್ಲೇನ್‌ ಹಾಗೂ ಹೆಲಿ ಟ್ಯಾಕ್ಸಿ ಗಳ ಮುಖಾಂತರ ಸಂಪರ್ಕ ಕಲ್ಪಿಸುವುದು, ಜೊತೆಗೆ ಜಾಯ್‌ ರೈಡ್‌ ಹಾಗೂ ರಿವರ್‌ ಕ್ರೂಸ್‌ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಸ್ವಾಗತಾರ್ಹ ಎಂದಿದ್ದಾರೆ.

ನಮ್ಮ ರಾಜ್ಯಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗಳಿಗೆ ಸುಮಧುರ, ಸಕಾರಾತ್ಮಕ ಅನುಭವವನ್ನು ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್‌ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ನೀಡುವುದರ ಮೂಲಕ ವೃತ್ತಿಪರತೆಯನ್ನು ವೃದ್ಧಿಗೊಳಿಸಲು ಒಂದು ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್‌ ಅನ್ನು ಪ್ರಾರಂಭಿಸಲಾಗುವುದು.

ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್‌ ಅನ್ನು ಅಭಿವೃದ್ಧಿಪಡಿಸಲಾಗುವುದು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್‌-ವೇ ನಿರ್ಮಿಸಲಾಗುವುದು.ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ರಾಜ್ಯದ ಸಂರಕ್ಷಿತ 844 ಸ್ಮಾರಕಗಳ ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುವುದು. ಇವರುಗಳನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮವಹಿಸಲಾಗುವುದು.
ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಉದ್ಯಾನವನದ ಕಡೆಗೆ ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ಪ್ರವಾಸಿಗರ ಅನುಕೂಲತೆಗಾಗಿ PPP ಮಾದರಿಯಲ್ಲಿ ಪ್ರಕೃತಿ ನಿರೂಪಣಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು.

ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್‌ ಅನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.

Related posts

ಕೇವಲ 4 ಗಂಟೆಯಲ್ಲೇ ಮಧುರೈ-ಕನ್ಯಾಕುಮಾರಿ-ರಾಮೇಶ್ವರಂ ಟೂರ್ ಫೈನಲ್‌, ಅಡಿಗಾಸ್‌ ಯಾತ್ರಾಗೆ ಪ್ರವಾಸಿಗರು ಫಿದಾ!

Adigas Yatra

ADIGAS YATRA: ಗುಜರಾತ್‌ನ “ರೋಡ್‌ ಆಫ್‌ ಹೆವೆನ್ಸ್‌ʼ ನೀವೂ ವೀಕ್ಷಿಸಿ! ರಣ್‌ ಆಫ್‌ ಕಛ್‌ ಪ್ರವಾಸಕ್ಕೆ ಕೆಲವೇ ಸೀಟ್‌ ಲಭ್ಯ!

Adigas Yatra

ಟೂರ್‌ ಆಪರೇಟರ್‌ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಬೇಕು: ವಿಶ್ವೇಶ್ವರ ಭಟ್‌

Adigas Yatra

This message appears for Admin Users only:
Please fill the Instagram Access Token. You can get Instagram Access Token by go to this page